vime | ಮುಂಗಾರು ಬೆಳೆ ವಿಮೆಗೆ ಅರ್ಜಿ ನೋಂದಣಿ ಪ್ರಾರಂಭ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಸರ್ಕಾರದಿಂದ ರೈತರಿಗೆ ಬೆಳೆ ಸಾಲ ಮತ್ತು ಬೆಳೆ ವಿಮೆಯನ್ನು ಒದಗಿಸಿಕೊಡಲಾಗುತ್ತಿದೆ. ಎಲ್ಲಾ ರೈತರು ಈ ಯೋಜನೆಯಡಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ಈ ನೋಂದಣಿ ಪ್ರಕ್ರಿಯೆ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ.
ಬೆಳೆ ವಿಮೆ ಯೋಜನೆ 2024
ಬೆಳೆ ಸಾಲ ಪಡೆಯುವ ರೈತರು ಬೆಳೆ ವಿಮೆ ಯೋಜನೆಗಳಲ್ಲಿ ಕಡ್ಡಾಯವಾಗಿ ಒಳಪಡುತ್ತಾರೆ. ಆದರೆ, ಬೆಳೆ ಸಾಲ ಪಡೆಯುವ ರೈತರು ಈ ಯೋಜನೆಯಲ್ಲಿ ನೋಂದಾಯಿಸಲು ಇಚ್ಛಿಸದಿದ್ದಲ್ಲಿ ಈ ವಿಷಯ ಕುರಿತು ಬ್ಯಾಂಕ್ ವ್ಯವಸ್ಥಾಪಕರಿಗೆ ನಿಮ್ಮ ಬೆಳೆ ವಿಮೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ ಒಂದು ವಾರದ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ಪತ್ರವನ್ನು ನೀಡಿದ್ದಲ್ಲಿ ಅಂತಹ ರೈತರ ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು. ಫಸಲು ಕೊಡುತ್ತಿರುವ ಬೆಳೆಗಳನ್ನು ಬೆಳೆದಿರುವ ಎಲ್ಲಾ ರೈತರು ಈ ಯೋಜನೆಯಲ್ಲಿ ತಮ್ಮ ಹೆಸರನ್ನ ನೋಂದಾಯಿಸಿಕೊಳ್ಳಬಹುದು.
ಇದನ್ನೂ ಸಹ ಓದಿ: BMRCL Recruitment 2024 | Metro ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಭರ್ಜರಿ ನೇಮಕಾತಿ
ಬೇಕಾಗಿರುವ ದಾಖಲೆಗಳು
- ರೈತರ ಆಧಾರ್ ಕಾರ್ಡ್
- ಪ್ರಸಕ್ತ ಸಾಲಿನ ಪಹಣಿ
- ಬ್ಯಾಂಕ್ ಖಾತೆಯ ಪಾಸ್ ಪುಸ್ತಕ
- ಸ್ವಯಂ ಘೋಷಿತ ಬೆಳೆ ವಿವರ
ವಿಮಾ ನಷ್ಟ ಪರಿಹಾರ ಹೇಗೆ ಅಂದಾಜಿಸಲಾಗುವುದು?
- ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿಮಾ ನಷ್ಟ ಪರಿಹಾರವನ್ನು ಕರ್ನಾಟಕ ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರವು ಗ್ರಾಮ ಪಂಚಾಯತಿ ಮಟ್ಟದಲ್ಲಿ ಸ್ಥಾಪಿಸಿರುವ ಮಳೆ ಮಾಪನ ಹಾಗೂ ಹವಾಮಾನ ಕೇಂದ್ರಗಳಲ್ಲಿ ದಾಖಲಾದ ಮಾಹಿತಿಯನ್ನಾಧರಿಸಿ ಅಂದಾಜಿಸಲಾಗುವುದು.
- ನಿಮ್ಮ ಬೆಳೆಗಳಿಗೆ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ ಮತ್ತು ಬೆಳೆ ಮುಳುಗಡೆ ಸಂದರ್ಭಗಳಲ್ಲಿ ಬೆಳೆ ನಷ್ಟವುಂಟಾದರೆ ವೈಯಕ್ತಿಕವಾಗಿ ನಷ್ಟವನ್ನು ನಿರ್ಧರಿಸಲು ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ವಿಮಾ ಸಂಸ್ಥೆ ಕಚೇರಿಗಳಿಗೆ ವಿಮೆ ಮಾಡಿಸಿದ ಬೆಳೆ ಹಾನಿಯ ವಿವರಗಳನ್ನು 72 ಗಂಟೆಗಳೊಳಗಾಗಿ ತಿಳಿಸತಕ್ಕದ್ದು.
- ಪರಿಹಾರದ ಮೊತ್ತವನ್ನು ನೀಡಲು ಅಧಿಸೂಚಿಸಲಾದ Term sheet, Pay out structure, Duration, Index (ಉದಾ: ಕಡಿಮೆ ಮಳೆ. ಅಧಿಕ ಮಳೆ-ಅಧಿಕ ಆದ್ರ್ರತೆ, ಅಧಿಕ ಮಳೆ, ಸತತ ನಾಲ್ಕು ದಿನಗಳಿಂದ ಅಧಿಕ ಮಳೆಯಿಂದಾಗಿ ಬೆಳೆಗಳಿಗೆ ಆಗುವ ಪ್ರತಿಕೂಲ ಪರಿಣಾಮಗಳು) ಗಳನ್ನಾಧರಿಸಿ ಅಂದಾಜಿಸಲಾಗುವುದು.
- ಗ್ರಾಮ ಪಂಚಾಯತ್ ಘಟಕದಲ್ಲಿ ವಿಮೆಗೆ ಒಳಪಟ್ಟ ಎಲ್ಲಾ ರೈತರಿಗೂ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುವುದು.
ವಿಮಾ ಕಂತಿನ ವಿವರಗಳು
ಅರ್ಜಿ ಸಲ್ಲಿಸುವುದು ಹೇಗೆ?
ನಿಮ್ಮ ಹತ್ತಿರದ ಬ್ಯಾಂಕುಗಳಿಗೆ / ಸಮೀಪದ ಸಾರ್ವಜನಿಕ ಸೇವಾ ಕೇಂದ್ರ (CSC) / ಗ್ರಾಮ ಒನ್ ಕೇಂದ್ರಗಳಲ್ಲಿ ನಿಮ್ಮ ಹೆಸರನ್ನು ನೊಂದಾಯಿಸಿಕೊಳ್ಳುಬಹುದು. ಈ ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು 31/07/2024 ಕೊನೆಯ ದಿನಾಂಕವಾಗಿದೆ.
ಇತರೆ ವಿಷಯಗಳು
Vehicle | ಕೇಂದ್ರ ಸರ್ಕಾರದಿಂದ ವಾಹನಗಳ ಖರೀದಿಗೆ ಆರ್ಥಿಕ ಸಹಾಯ
Gram Panchayat Recruitment 2024 | ಗ್ರಾಮ ಪಂಚಾಯತ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ