Daarideepa

KUWSDB Recruitment 2024 | 64 ಸಹಾಯಕ ಇಂಜಿನಿಯರ್, ಪ್ರಥಮ ವಿಭಾಗದ ಖಾತೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

0

ಹಲೋ ಸ್ನೇಹಿತರೇ, ಸರ್ಕಾರಿ ಉದ್ಯೋಗ ಪಡೆಯಬೇಕು ಎನ್ನುವದನ್ನು ಹಲವರ ಕನಸು. ಆದ್ರೆ ಅದು ಎಲ್ಲಾರಿಗೂ ನೆರವೆರುವುದಿಲ್ಲ, ಇದೀಗ ನಿಮಗಾಗಿ ಸರ್ಕಾರ ಹೊಸ ಉದ್ಯೋಗವನ್ನು ರೂಪಿಸಿದೆ ಅಂತಹ ಉದ್ಯೋಗದಲ್ಲಿ ಈ ಉದ್ಯೋಗವು ಒಂದಾಗಿದೆ. ಕರ್ನಾಟಕ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯಲ್ಲಿ ಖಾಲಿ ಬಿಟ್ಟ ಸುಮಾರು 64 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

KUWSDB Recruitment

ಸಹಾಯಕ ಎಂಜಿನಿಯರ್‌ (ಸಿವಿಲ್‌) ಹಾಗೂ ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್‌ ಸಿ) ಹುದ್ದೆ ಇದಾಗಿದ್ದು ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಫೆಬ್ರವರಿ 10ರ ಬಳಿಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಮಾರ್ಚ್‌ 10 ಇರುತ್ತದೆ.

ಹುದ್ದೆಗಳು ಹಾಗೂ ವಿದ್ಯಾರ್ಹತೆಗಳು:

ಸಹಾಯಕ ಎಂಜಿನಿಯರ್‌ಗಳು (ಸಿವಿಲ್‌) – 50 ಮತ್ತು ಪ್ರಥಮ ದರ್ಜೆ ಲೆಕ್ಕ ಸಹಾಯಕ (ಗ್ರೂಪ್‌ ಸಿ)- 14 ಹುದ್ದೆಗಳು ಇದೆ. ಸಹಾಯಕ ಎಂಜಿನಿಯರ್‌ ಗಳ ಹುದ್ದೆ (ಸಿವಿಲ್‌) ಗೆ ಅರ್ಜಿ ಸಲ್ಲಿಸುವವರು ಯಾವುದೇ ಅಂಗೀಕೃತ ಸಂಸ್ಥೆ ಹಾಗೂ ವಿಶ್ವವಿದ್ಯಾನಿಲಯದಿಂದ ಬಿ.ಇ. ಅಥವಾ ಬಿ.ಟೆಕ್‌ ಪದವಿ ಪಡೆದಿರಬೇಕು. ಅದೇ ರೀತಿ ಬಿ.ಕಾಂ ಪದವಿ ಪಡೆದವರು ಪ್ರಥಮ ದರ್ಜೆ ಲೆಕ್ಕ ಸಹಾಯಕರು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸೇವ ಶುಲ್ಕ

ಸಾಮಾನ್ಯ / ಪ್ರವರ್ಗ 2ಎ / 2ಬಿ / 3ಎ / 3ಬಿ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವು 750 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ -1, ಮಾಜಿ ಸೈನಿಕ ಮತ್ತು ವಿಶೇಷ ಚೇತನ ಅಭ್ಯರ್ಥಿಗಳು 500 ರೂ. ಅನ್ನು ಆನ್‌ಲೈನ್‌ ನ ಮೂಲಕ ಪಾವತಿಸಬಹುದು.

ವಯಸ್ಸಿನ ಮಿತಿ

ಅರ್ಜಿ ಸಲ್ಲಿಸುವವರು 35 ವರ್ಷ ಮೀರಬಾರದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆಯನ್ನು ಮಾಡಲಾಗಿದೆ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ- 1 ಅಭ್ಯರ್ಥಿಗಳಿಗೆ 5 ವರ್ಷಗಳು ಸಡಿಲಿಕೆಯನ್ನು ಅನ್ವಯಯಾಗುತ್ತದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕರ್ನಾಟಕ ಪರೀಕ್ಷಾ ಪ್ರಧಿಕಾರ (KEA) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆಗಳು ನಡೆಯಲಿದೆ. ಆಯ್ಕೆಯಾದವರಿಗೆ 27,650 ರೂ.-83,900 ರೂ. ಮಾಸಿಕ ವೇತನ ದೊರೆಯಲಿದೆ ಎಂದು ಈಗಾಗಲೇ ತಿಳಿಸಿದ್ದಾರೆ.

ಪರೀಕ್ಷೆ ನಡೆಯುವ ಮಾದರಿ:

ಇಂತಹ ಹುದ್ದೆಗಳಿಗೆ ಒಎಮ್‌ಆರ್ ಮಾದರಿಯ ಪ್ರಶ್ನೆ ಪತ್ರಿಕೆಯನ್ನು ನೀಡಲಾಗುವುದು ಹಾಗೂ ಈ ಮೂಲಕವಾಗಿ ಪರೀಕ್ಷೆಯನ್ನು ನಡೆಸಲಾಗುವುದು. ಸಹಾಯಕ ಎಂಜಿನಿಯರ್‌ (ಸಿವಿಲ್‌) ಹುದ್ದೆ: ತಲಾ ನೂರು ಅಂಕಗಳ ಎರಡು ಪ್ರಶ್ನೆ ಪತ್ರಿಕೆಗಳು ಇರುತ್ತದೆ. ಪತ್ರಿಕೆ -1ರಲ್ಲಿ ಸಾಮಾನ್ಯ ಜ್ಞಾನದ ಪ್ರಶ್ನೆಗಳನ್ನು ಕೇಳಲಾಗುವುದು, ಪತ್ರಿಕೆ – 2ರಲ್ಲಿ ನಿರ್ದಿಷ್ಟ ವಿಷಯದ ಕುರಿತಾದ ಪ್ರಶ್ನೆಗಳನ್ನು ಕೇಳಲಾಗುತ್ತದೆ.

ವೇತನ ಸೌಲಭ್ಯ:

ಹುದ್ದೆಯ ಹೆಸರುಮಾಸಿಕ ವೇತನ
ಸಹಾಯಕ ಇಂಜಿನಿಯರ್ (ಸಿವಿಲ್)ರೂ.43100-83900/-
ಮೊದಲ ವಿಭಾಗದ ಖಾತೆ ಸಹಾಯಕ (ಗುಂಪು-ಸಿ)ರೂ.27650-52650/-

ಪರೀಕ್ಷೆ ನಡೆಯುವ ಸ್ಥಳ

ಈ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೆಂಗಳೂರು, ಮೈಸೂರು ಹಾಗೂ ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಶಿವಮೊಗ್ಗ ಮತ್ತು ತುಮಕೂರು ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಪರೀಕ್ಷೆಯ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಪ್ರತಿಕಾ ಪ್ರಕಟಣೆ ಮತ್ತು ವೆಬ್‌ಸೈಟ್‌ ಮೂಲಕ ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿ ಸಲ್ಲಿಸುವುದು ಹೇಗೆ?.

ಕರ್ನಾಟಕ ಪರೀಕ್ಷಾ ಪ್ರಧಿಕಾರದ ಅಧಿಕೃತ ವೆಬ್‌ ಸೈಟ್‌ ಗೆ ಭೇಟಿ ನೀಡುವ ಮೂಲಕ ನೀವು ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-23460460ಕ್ಕೆ ಕರೆ ಮಾಡಿ.

ಇತರೆ ವಿಷಯಗಳು:

PM Street Vendors AtmaNirbhar Nidhi | ಪಿಎಂ ಬೀದಿ ವ್ಯಾಪಾರಿಗಳ ಸ್ವನಿಧಿಗೆ ಅರ್ಜಿ ಆಹ್ವಾನ

WCD Karnataka Anganwadi Recruitment 2024 | WCD ಅಂಗನವಾಡಿ ನೇಮಕಾತಿ 2024: ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿ

Leave A Reply
rtgh