Chamarajanagara District Gram Panchayat Recruitment 2024 : 15 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ
ಹಲೋ ಸ್ನೇಹಿತರೇ…. ಚಾಮರಾಜನಗರ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಆದ್ದರಿಂದ ನಮ್ಮ ಲೇಖನವನ್ನು ಕೊನೆಯವರೆಗೂ ಓದಿ.
ಹುದ್ದೆಯ ವಿವರಗಳು
ಸಂಸ್ಥೆಯ ಹೆಸರು | ಚಾಮರಾಜನಗರ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯ್ತಿ |
ಪೋಸ್ಟ್‌ಗಳ ಸಂಖ್ಯೆ: | 15 |
ಉದ್ಯೋಗ ಸ್ಥಳ | ಚಾಮರಾಜನಗರ (ಕರ್ನಾಟಕ) |
ಪೋಸ್ಟ್ ಹೆಸರು | ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆ |
ವಿದ್ಯಾರ್ಹತೆ
- ದ್ವಿತೀಯ ಪಿಯುಸಿ ಪಾಸಾಗಿರಬೇಕು.
- ಗ್ರಂಥಾಲಯ ವಿಜ್ಞಾನ ಸರ್ಟಿಫಿಕೇಶನ್ ಕೋರ್ಸ್ ಪಾಸ್ ಮಾಡಿದ್ದು, ಹಾಗೂ ಕನಿಷ್ಟ 3 ತಿಂಗಳ ಕಂಪ್ಯೂಟರ್ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.
- ಈ ವಿದ್ಯಾರ್ಹತೆ ಹೊರತು ಹೆಚ್ಚಿನ ವಿದ್ಯಾರ್ಹತೆ ಇದ್ದರೂ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದಿಲ್ಲ.
ವಯಸ್ಸಿನ ಮಿತಿ :
ದಿನಾಂಕ 12/10/2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನ : ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು ಸರ್ಕಾರವು ಕಾಲಕಾಲಕ್ಕೆ ನಿಗದಿಪಡಿಸುವ ಗೌರವ ಸಂಭಾವನೆಗೆ ಅರ್ಹರಾಗಿರತಕ್ಕದ್ದು.
ಅರ್ಜಿ ಶುಲ್ಕ :
• ಸಾಮಾನ್ಯ ಅಭ್ಯರ್ಥಿಗಳಿಗೆ – ರೂ. 200
• 2ಎ, 2ಬಿ ಅಭ್ಯರ್ಥಿಗಳಿಗೆ – ರೂ. 100
• ಪ.ಜಾತಿ, ಪ.ಪಂಗಡ, ಪ್ರ1ರ ಅಭ್ಯರ್ಥಿಗಳಿಗೆ – ರೂ. 50
• ವಿಶೇಷ ಚೇತನ ಅಭ್ಯರ್ಥಿಗಳಿಗೆ – ಶುಲ್ಕವಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ | Click Here |
ಅಪ್ಲೇ ಆನ್ಲೈನ್ | Click Here |
ಅಧಿಕೃತ ವೆಬ್‌ಸೈಟ್ | Click Here |
ಅರ್ಜಿ ಸಲ್ಲಿಸುವ ದಿನಾಂಕಗಳು
- ಆರಂಭಿಕ ದಿನಾಂಕ : 13-09-2024
- ಕೊನೆ ದಿನಾಂಕ : 12-10-2024
ಇತರೆ ವಿಷಯಗಳು :
KPSCಯಲ್ಲಿ 97 panchayat development officer ಹುದ್ದೆಗಳಿಗೆ ಅರ್ಜಿ ಆಹ್ವಾನ
GTTC Recruitment 2024 | 90 ಕ್ಕೂ ಹೆಚ್ಚು ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ