Daarideepa

ಗೌರಿ ಹಬ್ಬಕ್ಕೆ New Gift: ಗೃಹಲಕ್ಷ್ಮೀಯರೇ ರೀಲ್ಸ್ ಮಾಡಿ, ಬಹುಮಾನ ಗೆಲ್ಲಿ!

0

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನದ ಮೂಲಕ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ರಾಜ್ಯದ ಕುಟುಂಬದ ಯಜಮಾನಿಯರಿಗೆ ಸಂತಸದ ಸುದ್ಧಿ; ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅತ್ಯುತ್ತಮ ಅವಕಾಶ ಕಲ್ಪಿಸಿದ್ದಾರೆ.

Gruha Lakshmi kannada

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯು ಜಾರಿಗೆ ಬಂದು ಇಲ್ಲಿಗೆ ಒಂದು ವರ್ಷವಾಗಿದೆ. ಈ ಸಂದರ್ಭದಲ್ಲಿ ಕುಟುಂಬದ ಎಲ್ಲ ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಭಾಶಯ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ.ಜೊತೆಗೆ ಯಜಮಾನಿಯರಿಗೆ ಒಂದು ಬಹುಮಾನವನ್ನೂ ಘೋಷಿಸಿದ್ದಾರೆ.

ಇಲ್ಲಿಯವರೆಗೆ ಗೃಹಲಕ್ಷ್ಮೀ ಫಲಾನುಭವಿಗಳಾದ ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆಯನ್ನು ಈ ಒಂದು ವರ್ಷದಲ್ಲಿ ತಂದಿದೆ ಎನ್ನುವುದನ್ನು ಯಜಮಾನಿಯರು ಹಂಚಿಕೊಳ್ಳಲು ಸಚಿವರು ಕೋರಿದ್ದಾರೆ. ರೀಲ್ಸ್ ಮಾಡಿಸಾಮಾಜಿಕ ಜಾಲ ಜಾಲತಾಣಗಳಾದ ಯುಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್ ಗಳಲ್ಲಿ ಶೇರ್ ಮಾಡುವ ಮೂಲಕ ಅದನ್ನು ಹಂಚಿಕೊಳ್ಳುವಂತೆ ಕೋರಿದ್ದಾರೆ.

ಯಾವ ಗೃಹಲಕ್ಷ್ಮಿಯರು ಮಾಡಿದ ರೀಲ್ಸ್ ಗೆ ಜಾಸ್ತಿ ವಿವರ್ಸ್ ಬಂದಿದೆಯೋ ಅಂತಹ ಗೃಹಲಕ್ಷ್ಮಿಯರಿಗೆ ಒಂದು ಬಹುಮಾನವನ್ನು ಘೋಷನೆ ಮಾಡಿದ್ದಾರೆ. ಇಂದಿನಿಂದ 1 ತಿಂಗಳು ಅಂದರೆ ಸೆಪ್ಪಂಬರ್ 30ನೇ ತಾರೀಖಿನವರೆಗೆ ಗೃಹಲಕ್ಷ್ಮಿಯರು ತಮ್ಮ ರೀಲ್ಸ್ ಗಳನ್ನು ಯುಟ್ಯೂಬ್, ಇನ್ ಸ್ಟಾಗ್ರಾಮ್, ಫೇಸ್ ಬುಕ್ ಗಳಲ್ಲಿ ಹಂಚಿಕೊಳ್ಳಬೇಕಿದೆ. ಹೆಚ್ಚು ವಿವರ್ಸ್ ಇರುವ ಗೃಹಲಕ್ಷ್ಮಿಯರಿಗೆ ಸಚಿವರು ವೈಯಕ್ತಿಕವಾಗಿ 1 ಬಹುಮಾನವನ್ನು ನೀಡಲಿದ್ದಾರೆ.

Related Posts

udyoga | ಸರ್ಕಾರ ನೀಡುತ್ತಿದೆ 1.00 ಲಕ್ಷ ಜೊತೆ 33% ಸಬ್ಸಿಡಿ

ಮೊದಲ 50 ಯಜಮಾನಿಯರ ರೀಲ್ಸ್ ಹಾದಿಯನ್ನು ಎದುರು ನೋಡುತ್ತಿದ್ದೇನೆ; ಈ ಒಂದು ಗೃಹಲಕ್ಷ್ಮೀ ಯೋಜನೆಯಿಂದ ಜೀವನದಲ್ಲಿ ಆದ ಬದಲಾವಣೆಯನ್ನು ನಮ್ಮೆಲ್ಲ ಕರ್ನಾಟಕದ ಜನರ ಮುಂದೆ ಹಂಚಿಕೊಳ್ಳಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಯೋಜನೆಯ ಎಲ್ಲ ಯಜಮಾನಿಯರಲ್ಲಿ ಮನವಿ ಮಾಡಿದ್ದಾರೆ.

ಇನ್ಮೇಲೆ UPI Id ಹಾಕೋದ್‌ ಬೇಡ, Smile ಮಾಡಿದ್ರೆ ಹಣ Pay…

Hitech Harvester Hub: ರಾಜ್ಯದ ರೈತರಿಗೆ ಸಿಗಲಿದೆ 40 ಲಕ್ಷ…

Leave A Reply
rtgh