Daarideepa

ICMR Recruitment 2024 | ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ

0

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಸ್ತುತ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೊನೆಯ ದಿನಾಂಕಕ್ಕೂ ಮೊದಲು ಅರ್ಜಿಗಳನ್ನು ಸಲ್ಲಿಸಬೇಕು. ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ ಹಾಗೂ ಕೊನೆಯ ದಿನಾಂಕವನ್ನು ತಿಳಿಯಲು ಬಯಸಿದರೆ ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ.

ICMR Recruitment 2024

ICMR ನೇಮಕಾತಿ 2024

ICMR ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು 22 ಖಾಲಿ ಹುದ್ದೆಗಳು ಲಭ್ಯವಿವೆ.  ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು 16-2-2024 ರವರೆಗೆ ತೆರೆದಿರುತ್ತದೆ. ಅರ್ಹ ಅಭ್ಯರ್ಥಿಗಳು ತಡಮಾಡದೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ICMR ನ ಅಧಿಕೃತ ವೆಬ್‌ಸೈಟ್‌ಗೆ https://recruit.icmr.org.in/ ನಲ್ಲಿ ಭೇಟಿ ನೀಡಬೇಕು ಮತ್ತು ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ತಪ್ಪಿಲ್ಲದೇ ಪೂರ್ಣಗೊಳಿಸಬೇಕು.

ICMR ನೇಮಕಾತಿಯ ವಿವರಗಳು

ಸಂಸ್ಥೆ: ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR)
ಪೋಸ್ಟ್ ಹೆಸರ: ಪ್ರೊಫೆಸರ್ ಹಾಗೂ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ : 22
ಸಂಬಳ: ಪ್ರತಿ ತಿಂಗಳಿಗೆ ₹67,700 – 2,15,900/- ವೇತನ
ಅರ್ಜಿ ಮೋಡ್ : ಆನ್‌ಲೈನ್
ಅಧಿಕೃತ ವೆಬ್‌ಸೈಟ್ : recruit.icmr.org.in

ICMR ನೇಮಕಾತಿಯ ಒಟ್ಟು ಹುದ್ದೆಗಳು

ಪ್ರೊಫೆಸರ್3
ಅಸಿಸ್ಟೆಂಟ್ ಪ್ರೊಫೆಸರ್19

ICMR ನೇಮಕಾತಿಯ ಅರ್ಹತೆ

ಶೈಕ್ಷಣಿಕ ಅರ್ಹತೆ: ಅರ್ಜಿ ಸಲ್ಲಿಸಲು ಅರ್ಹರಾಗಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ ಪದವಿಯನ್ನು ಹೊಂದಿರಬೇಕು. ಪ್ರೊಫೆಸರ್ ಹುದ್ದೆಗೆ ಪದವಿ, ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಪದವಿ , ಎಂಬಿಬಿಎಸ್ ಪೂರ್ಣಗೊಳಿಸಿರಬೇಕು.

ವಯೋಮಿತಿ : ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ಅಭ್ಯರ್ಥಿಯ ವಯಸ್ಸು 50 ವರ್ಷಕ್ಕಿಂತ ಹೆಚ್ಚಿರಬಾರದು. 

ಮಾಸಿಕ ಸಂಬಳ:

Related Posts

ಕರ್ನಾಟಕದಲ್ಲಿ ಖಾಲಿ ಇರುವ 1 ಸಾವಿರ VA ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಹ ಅಭ್ಯರ್ಥಿಗಳಿಗೆ ಮಾಸಿಕ ಸಂಬಳ ₹67,700 – 2,15,900/- ದವರೆಗೆ ನಿಗದಿಪಡಿಸಲಾಗಿದೆ.

ICMR ನೇಮಕಾತಿಯ ಅರ್ಜಿ ಶುಲ್ಕ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು INR 1,500 ಅರ್ಜಿ ಶುಲ್ಕವನ್ನು ಪಾವತಿಸ ಬೇಕಾಗುತ್ತದೆ. SC/ST/ಮಹಿಳೆ/PWD/EWS ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ ಇವರಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ICMR ನೇಮಕಾತಿಯ ಆಯ್ಕೆ ಪ್ರಕ್ರಿಯೆ

ICMR (ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್) ನೇಮಕಾತಿ ಅಧಿಸೂಚನೆಯ ಪ್ರಕಾರ, ಪ್ರೊಫೆಸರ್ ಹಾಗೂ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ಮಾಡಲಾಗುತ್ತದೆ.

ICMR ನೇಮಕಾತಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ

  1. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ಗೆ @ recruit.icmr.org.in ಭೇಟಿ ನೀಡಬೇಕು. 
  2. ಮುಖಪುಟಕ್ಕೆ ಹೋಗಿ ಮತ್ತು ಒದಗಿಸಿದ ಲಿಂಕ್ ಅನ್ನು ಕ್ಲಿಕ್ ಮಾಡಿ.
  3. ಅರ್ಜಿ ನಮೂನೆಯು ನಿಮ್ಮ ಮುಂದೆ ತೆರೆಯುತ್ತದೆ. ಅದನ್ನು ತಪ್ಪಿಲ್ಲದಂತೆ ಭರ್ತಿ ಮಾಡಿ.
  4. ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸಲ್ಲಿಸಿ ಮತ್ತು ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅರ್ಜಿ ಶುಲ್ಕವನ್ನು ಪಾವತಿಸಿ. ಅಪ್ಲಿಕೇಶನ್ ಅನ್ನು ಯಶಸ್ವಿಯಾಗಿ ಸಲ್ಲಿಸಿದ ನಂತರ, ನೀವು ದೃಢೀಕರಣ ಇಮೇಲ್ ನಲ್ಲಿ ಸ್ವೀಕರಿಸುತ್ತೀರಿ.
  5. ಅಂತಿಮವಾಗಿ, ಫಾರ್ಮ್ ಅನ್ನು ಸಲ್ಲಿಸಿ ಮತ್ತು ಎಂಡೋಸ್ಮೆಂಟ್‌ ಅನ್ನು ನಿಮ್ಮ ಬಳಿ ಸುರಕ್ಷಿತವಾಗಿರಿಸಿಕೊಳ್ಳಿ.

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15-01-2024
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-02-2024

ICMR ನೇಮಕಾತಿ ಅಧಿಸೂಚನೆ ಪ್ರಮುಖ ಲಿಂಕ್‌ಗಳು

KUWSDB Recruitment 2024 | ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

Leave A Reply
rtgh